ಬಳ್ಳಾರಿ: ನಾವು ಮಹಿಳೆಯರಿಗೆ ಪ್ರತೀ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡುತ್ತೇವೆಂದು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಡಿ.ಕೆ ಶಿವಕುಮಾರ್, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು ನಾವು ದುಡ್ಡು ಕೊಡ್ತಾ ಇರಬೇಕು.ಇವತ್ತು ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆಯೇ ಹಣ ಬಂದು ಬಿಡುತ್ತಾ ಎರಡು, ಮೂರು ಇಲ್ಲವೇ ಐದು ವರ್ಷ ಆಗುತ್ತೆ ಅಲ್ವ, ಅದೇ ರೀತಿ ಗೃಹಲಕ್ಷ್ಮೀ ಯೋಜನೆಯ ಹಣ ಯಜಮಾನಿಯರಿಗೆ ಬಂದಾಗ ಬರುತ್ತೆ ಎನ್ನುವ ಮೂಲಕ ಹಾರಿಕೆಯ ಉತ್ತರ ನೀಡಿದರು.