

ಮಂಗಳೂರು, ಸೆ.18:ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವುದಲ್ಲ, ಅಭಿವೃದ್ಧಿಯೇ ನಮ್ಮ ಮುಖ್ಯ ಚಿಂತನೆ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅವರು ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿ, ಕರಾವಳಿಯ ಸಮಗ್ರ ಅಭಿವೃದ್ಧಿಯ ಚಿಂತನೆಯೊAದಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದೇವೆ. ವಿರೋಧ ಪಕ್ಷದ ನಾಯಕರು ಸರ್ಕಾರದ ನಡೆಗೆ ಗಾಬರಿಯಾಗಿದ್ದಾರೆ, ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು. ಬಳಿಕ ಕದ್ರಿಯಿಂದ ಪಡಿಲ್ನ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದವರೆಗೆ ‘ಅಂಬಾರಿ’ ಓಪನ್ ಟಾಪ್ ಬಸ್ನಲ್ಲಿ ರೋಡ್ ಶೋ ಮೂಲಕ ತೆರಳಿದರು.
ಕ್ಯಾಬಿನೆಟ್ ಸಭೆಯ ನಂತರ ಸುದ್ಧಿಗೋಷ್ಠಿ ನಡೆಸಿದ ಬಳಿಕ ಡಿಕೆ ಶಿವಕುಮಾರ್ ಕಸ್ತೂರಿರಂಗನ್ ವರದಿ ವಿಚಾರವಾಗಿ ಜನರೊಂದಿಗೆ ಸಂವಾದ ನಡೆಸಲು ಹೆಬ್ರಿಗೆ ತೆರಳಲಿದ್ದು ನಂತರ ಪ್ರವಾಸವನ್ನು ಮುಗಿಸಿ ಇಂದು ರಾತ್ರಿ ಮಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿ ನಾಳೆ ಬೆಳಿಗ್ಗೆ ಬೆಂಗಳೂರಿಗೆ ತೆರಳಲಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
