ಬೆಂಗಳೂರು : ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಾರ್ಕಳದ ಕಾಂಗ್ರೆಸ್ ಸಮಾವೇಶದಲ್ಲಿ ಹೇಳಿಕೆ ನೀಡಿ ಭಾರೀ ಸಂಚಲನ ಮೂಡಿಸಿದ್ದರು. ಮೊಯ್ಲಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಸಿಎಂ ಎಂಬ ವೀರಪ್ಪ ಮೊಯ್ಲಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೊಯ್ಲಿ ಹೇಳೋದು ಅಥವಾ ಇನ್ನೊಬ್ರು ಹೇಳೋದು ಮುಖ್ಯವಲ್ಲ. ಹೈಕಮಾಂಡ್ ನಾಯಕರು ಏನು ಹೇಳುತ್ತಾರೆ ಅದನ್ನು ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

K