Share this news

ಬೆಂಗಳೂರು,ಸೆ.17 : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲ್ಲ,ಬದಲಿಗೆ ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, BPL ಕಾರ್ಡ್ ಪಡೆದಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, APL ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ಕೂಡ ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *