Share this news

ನವದೆಹಲಿ:ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು,ಭಾರತದಲ್ಲಿ ಯಾವ ಸರ್ಕಾರ ರಚನೆಯಾಗಬಹುದೆಂದು ಜಗತ್ತೇ ಕುತೂಹಲದಿಂದ ಎದುರು ನೋಡುತ್ತಿದೆ. ಇಂತಹ ಸಂದರ್ಭದಲ್ಲೇ ಭಾರತದ ವಿರುದ್ಧ ಭಯೋತ್ಪಾದಕ ಸಂಘಟನೆಯೊಂದು ಬೆದರಿಕೆ ಹಾಕಿದೆ.

ಈಗಾಗಲೇ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಿಎಎ. ಹಾಗೂ ಎನ್ಆರ್’ಸಿ ಜಾರಿಗೆ ಮುಂದಾಗಿದೆ. ಆದರೆ ಇದೀಗ ದೇಶದಲ್ಲಿ ಎನ್‌ಆರ್‌ಸಿ ಜಾರಿಯಾಗಲು ಬಿಡುವುದಿಲ್ಲ ಒಂದು ವೇಳೆ ಜಾರಿಗೆ ಯತ್ನಿಸಿದರೆ ಭಾರತಕ್ಕೆ ಬೆಂಕಿ ಹಚ್ಚುವುದಾಗಿ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಬೆದರಿಕೆ ಹಾಕಿದೆ.
ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ.
ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್‌ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಬಾ ಪತ್ರದ ಮೂಲಕ ಬೆದರಿಕೆ ಹಾಕಿದೆ. ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮ್ ಸಮುದಾಯಕ್ಕೆ ತೊಂದರೆ ಕೊಟ್ಟರೆ ಲಷ್ಕರ್ ಪ್ರತೀಕಾರ ತೀರಿಸಲಿದೆ. ಬಂಗಾಳ ಮಾತ್ರವಲ್ಲ, ಇಡೀ ದೇಶವನ್ನೇ ಉರಿಸುತ್ತೇವೆ ಎಂದು ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.

ಶಂತನು ಠಾಕೂರ್ ಇತ್ತೀಚೆಗೆ ಟಿಎಂಸಿ ನಾಯಕರಿಗೆ ನೇರ ಸವಾಲು ಹಾಕಿದ್ದರು. ಗೂಂಡಾಗಳಂತೆ ವರ್ತಿಸುವ ಟಿಎಂಸಿ ಕಾರ್ಯಕರ್ತರಿಗೆ ಪೌರತ್ವ ನೀಡುವುದಿಲ್ಲ ಎಂದು ಬೆದರಿಸಿದ್ದರು.ಈ ಹೇಳಿಕೆ ಭಾರಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಲಷ್ಕರ್ ಇ ತೈಬಾ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದೆ.
ಚುನಾವಣೆ ಸಂದರ್ಭದಲ್ಲೇ ಇಂತಹ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಭಯೋತ್ಪಾದಕ ಕೃತ್ಯಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದೆ

 

 

 

 

 

Leave a Reply

Your email address will not be published. Required fields are marked *