
ನವದೆಹಲಿ,ಜ.15: ಅಕ್ರಮ ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಚೇರಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಆದರೆ ಕಾರ್ಯಾಚರಣೆ ನಡೆಸಿದ ಇಡಿ ಅಧಿಕಾರಿಗಳ ವಿರುದ್ಧವೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎಫ್‌ಐಆರ್ ದಾಖಲಿಸಿತ್ತು. ಈ ಕ್ರಮದ ವಿರುದ್ಧ ಇಡಿ ಕರ್ತವ್ಯಕ್ಕೆ ಅಡ್ಡಿ ಆರೋಪದ ಮೇಲೆ ಸುಪ್ರೀಂ ಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿದೆ. ಇದರಿಂದಾಗಿ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗವಾಗಿದೆ.
ಎಫ್‌ಐಅರ್‌ಗೆ ತಡೆ ನೀಡಿದ ಸುಪ್ರೀಂ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಡಿಜಿಪಿ ರಾಜೀವ್ ಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

.
.
.
.
