Share this news

ಬೆಂಗಳೂರು: ಹಲವಾರು ಕಾರ್ಯಕ್ರಮಗಳಲ್ಲಿ ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡಿಲ್ಲವೇಕೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಐಎಎಸ್ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ಈ ಕುರಿತು ಅಧಿಕಾರಿಗಳು ಯಾಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್ ಸೂಚಿಸಿದೆ. ಈ ಎಲ್ಲಾ ಸಮಸ್ಯೆಗಳನ್ನು ಮರೆಮಾಚಲು ರವಿಕುಮಾರ್ ಹೇಳಿಕೆಯನ್ನೇ ಎಳೆದು ತರಲಾಗಿದೆ. ಬಿಜೆಪಿಯವರು ಮಾತನಾಡಿದರೆ ಮಾಡಿದರೆ ಎಫ್‌ಐಆರ್ ದಾಖಲಿಸುತ್ತಾರೆ. ಕಾಂಗ್ರೆಸ್‌ನವರು ಮಾತನಾಡಿದರೆ ಯಾವುದೇ ದೂರು ದಾಖಲಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಕರೆಯುತ್ತಾರೆ. ರಾಷ್ಟ್ರಪತಿ,ಪ್ರಧಾನಿಗೆ ಗೌರವ ಕೊಡದೇ ಏಕವಚನದಲ್ಲೇ ಮಾತಾಡುತ್ತಾರೆ. ಅಂದರೆ ಕಾಂಗ್ರೆಸ್‌ಗೆ ಬೇರೆಯೇ ರೀತಿಯ ಕಾನೂನು ಇದೆ ಎಂದಾಯಿತು. ರವಿಕುಮಾರ್ ಯಾವ ರೀತಿಯ ಅಶ್ಲೀಲ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್ ಸ್ಪಷ್ಟಪಡಿಸಲಿ ಎಂದರು.
ಸಿಎA ಕುರ್ಚಿ ಕದನ ಜೋರಾಗಿದ್ದು,ಸಿಎಂ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್ ಶಾಸಕರು ಕೂಡ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ದೇವಾಲಯಗಳಿಗೆ ಹೋಗಿ ಪೂಜೆ ಮಾಡಿಸುತ್ತಿರುವುದು ಅದರ ಲಕ್ಷಣ. ಬಿಜೆಪಿಗೆ ಮದ್ದು ಅರೆಯುವ ಮೊದಲು ಕಾಂಗ್ರೆಸ್‌ಗೆ ಕಾಂಗ್ರೆಸ್ಸೇ ಮದ್ದು ಅರೆಯಲಿ ಎಂದು ಲೇವಡಿ ಮಾಡಿದ್ದಾರೆ.

 

 

 

Leave a Reply

Your email address will not be published. Required fields are marked *