ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಾವು ಮಾಡಿದ್ದ ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಎಂಬಲ್ಲಿ ನಡೆದಿದೆ.
ಮುಡಾರು ಗ್ರಾಮದ ಹಡ್ಯಾಲು ನಿವಾಸಿ ಹೇಮಲತಾ(45) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಳೆದ ಹಲವು ಸಮಯದಿಂದ ಅನಾರೋಗ್ಯಪೀಡಿತರಾಗಿದ್ದ ಹೇಮಲತಾ ಅವರು ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚು ಮಾಡಿದ್ದು, ಇದರಿಂದ ತಾನು ಸಂಘ ಹಾಗೂ ಬ್ಯಾಂಕಿನಿಂದ ಪಡೆದ ಸಾಲ ಮರುಪಾವತಿಸಲಾಗದೇ ಮನನೊಂದು ಮುಡಾರಿನ ಹಡ್ಯಾಲು ಸನಾತನ ಕ್ರೀಡಾಂಗಣದ ಬಳಿಯ ಸರ್ಕಾರಿ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ