ಉಡುಪಿ:ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು,ಉಡುಪಿಯ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮುಖ್ಯ ಅಭ್ಯಾಗತರಾಗಿ ಆಗಮಿಸಿದ ರಂಗಭೂಮಿ ಕಲಾವಿದರಾದ ಆರ್ ಜೆ ಕಾಜಲ್ ಅವರು ಮಾತನಾಡಿ ಜೀವನದಲ್ಲಿ ಕಷ್ಟಗಳು ಬಂದಾಗ ಎದೆಗುಂದದೆ ಧೈರ್ಯವಾಗಿ ಎದುರಿಸಬೇಕು,ಆಗ ಮಾತ್ರ ಎಲ್ಲರೂ ಯಶಸ್ವೀ ಬದುಕನ್ನು ರೂಪಿಸಲು ಸಾಧ್ಯವಾಗುತ್ತದೆ.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ಜನರು ಜಾತಿ, ಭಾಷೆ,ಧರ್ಮದ ಹೆಸರಿನಲ್ಲಿ ಕಚ್ಚಾಡುವ ಬದಲು ಸೌಹಾರ್ದಯುತವಾಗಿ ಬದುಕಿ ಮಾದರಿಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ ಜೆ,ಮಹಿಳಾ ಘಟಕದ ಸಂಯೋಜಕರಾದ ಲವಿಟಾ ಡಿಸೋಜ,ವಿದ್ಯಾರ್ಥಿ ಪ್ರತಿನಿಧಿ ಆಶ್ಲಿ ಥೋಮಸ್ ಉಪಸ್ಥಿತರಿದ್ದರು. ವಿಜಯಲಕ್ಷ್ಮೀ ಸ್ವಾಗತಿಸಿ,ಸ್ವಪ್ನ ವಂದಿಸಿದರು. ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.