
ಉಡುಪಿ, ಜೂ 06: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ರೋಟರಿ ಕ್ಲಬ್ ಮಣಿಪಾಲದ ಜಂಟಿ ಆಶ್ರಯದೊಂದಿಗೆ ಜೂ. 5ರಂದು ವಿಶ್ವಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನೊಲೊಜಿ ಮಾಹೆಯ ಸಹಾಯಕ ಪ್ರಾಧ್ಯಾಪಕ ನೌಷ ಶೆಟ್ಟಿ ಪ್ಲಾಸ್ಟಿಕ್ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಮಣಿಪಾಲದ ಅಧ್ಯಕ್ಷೆ ಶಶಿಕಲಾ ರಾಜವರ್ಮ ಪರಿಸರ ಸಂರಕ್ಷಣೆ ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ ಎಂದರು.ಮಣಿಪಾಲ ರೋಟರಿ ಕ್ಲಬ್ ಕಾರ್ಯದರ್ಶಿ ವಾಣಿಶ್ರೀ ಹಾಗೂ ರೊಟೆರಿಯನ್ ರಾಜವರ್ಮ ಅರಿಗ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಚಿತ್ರಕಲಾ ಸ್ಪರ್ಧೆಯವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಗಿಡ ನೆಟ್ಟು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ಶೆಟ್ಟಿ, ಜೆ.ಇ.ಇ/ನೀಟ್‌ಫೌಂಡೇಷನ್‌ಸ್ಟ್ಯೂಡೆAಟ್ ಕೋರ್ಡಿನೇಟರ್ ಶಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪೃಕೃತಿ ಕಾರ್ಯಕ್ರಮ ನಿರ್ವಹಿಸಿ,ಗಣಿತ ಶಿಕ್ಷಕ ಕಿಶನ್‌ನಾಯಕ್ ವಂದಿಸಿದರು.


.
.
.
.
.
.
.
.
.
.
.
.
.
.
.
.
.
.
.
.
