Share this news

ಮೂಡಬಿದಿರೆ: ಪ್ರತಿಯೊಬ್ಬರು ತಾನು ಖುಷಿಯಾಗಿರಬೇಕು, ಸಂತೋಷ ಮತ್ತು ನೆಮ್ಮದಿಯ ಬದುಕು ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಅದನ್ನು ಪಡೆದುಕೊಳ್ಳಲು ವಿಫಲರಾಗುತ್ತಿದ್ದಾರೆ. ಒತ್ತಡ ರಹಿತಜೀವನ ಕ್ರಮ,ಖುಷಿ, ನೆಮ್ಮದಿ ಹಾಗೂ ಸಂತೋಷದಿಂದಿರಲು ನಿತ್ಯ ಯೋಗ ಅಭ್ಯಾಸ ಮಾಡಬೇಕು.ಇದು ಶರೀರ, ಮನಸ್ಸು,ಬುದ್ಧಿ ಮತ್ತು ಭಾವನೆಗಳನ್ನು ಸುದೃಢಗೊಳಿಸಿ ಆರೋಗ್ಯಪೂರ್ಣ ಜೀವನಕ್ಕೆ ಸಹಕಾರಿಯಾಗುತ್ತದೆ, ಯೋಗದಿಂದ ವ್ಯಕ್ತಿ ಬೆಳೆಯುತ್ತಾನೆ.ಮತ್ತು ಸಮಾಜವನ್ನು ಬೆಳೆಯಲು ಪ್ರೇರಣೆ ನೀಡುತ್ತಾನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್ ಹೇಳಿದರು.

ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಇವರ ಸಹಭಾಗಿತ್ವದಲ್ಲಿ ಮಂಗಳಜ್ಯೋತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಸಾಮೂಹಿಕ ಯೋಗಭ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯೋಗ ಸಾಧಕ ಹಾಗೂ ಸಂಘಟಕ ಶೇಖರ್ ಕಡ್ತಲ ಸಾಮೂಹಿಕ ಅಭ್ಯಾಸ ನಡೆಸಿ ಎಲ್ಲರೂ ಉತ್ತಮ ಆರೋಗ್ಯವನ್ನು ಪಡೆದು ಸೌಹಾರ್ದತೆಯ ಬದುಕು ನಡೆಸಲು ಯೋಗ ಸಹಕಾರಿಯಾಗಿದೆ. ಇದನ್ನು ನಿತ್ಯ ಜೀವನದಲ್ಲಿ ಅಳವಡಿಸಿ ಸಂತೋಷ ಮತ್ತು ಆರಾಮದಾಯಕ ಜೀವನ ನಡೆಸಲು ವಿಶ್ವಯೋಗ ದಿನಾಚರಣೆ ಪ್ರೇರಣೆಯಾಗಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ತಾಲೂಕು ಸಮನ್ವಯಧಿಕಾರಿ ಡಾ. ಪ್ರಶಾಂತ್ ಕುಮಾರ್ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯ್ಸ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ನರೇಶ್ ಮಲ್ಲಿಗೆ ಮಾಡು, ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ರಮೇಶ್ ಆಚಾರ್ಯ ಸ್ವಾಗತಿಸಿದರು. ಸಾಮೂಹಿಕ ಯೋಗಾಭ್ಯಾಸದಲ್ಲಿ ಎಲ್ಲಾ ಅತಿಥಿಗಳು ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಭಾಗವಹಿಸಿದ್ದು ಪ್ರತಿಜ್ಞಾವಿಧಿ ಬೋಧಿಸಿ,ರಸಪ್ರಶ್ನೆ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

 

 

                        

                          

 

 

 

 

 

                        

                          

 

 

Leave a Reply

Your email address will not be published. Required fields are marked *